ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ.
ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಅಥವಾ ನಾಳೆ ಬೆಳಗ್ಗೆ ಒಳಗಡೆ ಹೊರ ಬೀಳಲಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.