Home ಟಾಪ್ ಸುದ್ದಿಗಳು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳರೇ ಕಾರಣ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳರೇ ಕಾರಣ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ವ್ಯಕ್ತಿ ಕಾರಣ ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಂ.ಕೆ.ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.


ಬೆಂಗಳೂರಿನಲ್ಲಿ ಇತ್ತೀಚೆಗೆ ಮೊಬೈಲ್ ಅಂಗಡಿ ಮಾಲೀಕನ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರಂದ್ಲಾಜೆ, “ತಮಿಳುನಾಡಿನಿಂದ ಜನರು ಇಲ್ಲಿಗೆ ಬರುತ್ತಾರೆ, ತರಬೇತಿ ಪಡೆಯುತ್ತಾರೆ ಮತ್ತು ಇಲ್ಲಿ ಬಾಂಬ್ ಗಳನ್ನು ಇಡುತ್ತಾರೆ ಎಂದು ಹೇಳಿದ್ದರು.


ಶೋಭಾ ಕರಂದ್ಲಾಜೆಯವರ ಹೇಳಿಕೆಯನ್ನು ಖಂಡಿಸಿರುವ ಶೋಭಾ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಇದೊಂದು ಬೇಜವಾಬ್ದಾರಿ ಹೇಳಿಕೆಯಾಗಿದ್ದು, ತಮಿಳರು ಹಾಗೂ ಕನ್ನಡಿಗರು ಇಬ್ಬರೂ ಈ ಹೇಳಿಕೆಯನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version