ಡಿಎಂಕೆ ಫೈಲ್ಸ್ ವಿಚಾರ| ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

Prasthutha|

ಚೆನ್ನೈ: ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರ ಇಂದು (ಬುಧವಾರ) ಮಾನನಷ್ಟ ಮೊಕದ್ದಮೆ ಹೂಡಿದೆ.

- Advertisement -

ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲರು ಆರೋಪಿಸಿದ್ದಾರೆ.


2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್ಗೆ ₹200 ಕೋಟಿ ನೀಡಲಾಗಿದೆ. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅದು ಅವರು ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ ಎಂದು ಅಣ್ಣಾಮಲೈ ಇತ್ತೀಚೆಗೆ ಆರೋಪಿಸಿದ್ದರು.

- Advertisement -


ಅಣ್ಣಾಮಲೈ ಅವರು 1.34 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯ ದೀರ್ಘ ಪಟ್ಟಿಯನ್ನು ಈ ವರ್ಷ ಏಪ್ರಿಲ್ 14 ರಂದು ಬಹಿರಂಗಪಡಿಸಿದ್ದರು. ಇದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ದುರೈ ಮುರುಗನ್, ಇವಿ ವೇಲು, ಕೆ ಪೊನ್ಮುಡಿ, ವಿ ಸೆಂಥಿಲ್ ಬಾಲಾಜಿ, ಮತ್ತು ಮಾಜಿ ಕೇಂದ್ರ ಸಚಿವ ಎಸ್ ಜಗತ್ರಕ್ಷಕನ್ ಸೇರಿದಂತೆ ಹಲವರ ಒಡೆತನದಲ್ಲಿದೆ ಎಂದು ಆರೋಪಿಸಿದ್ದಾರೆ.



Join Whatsapp