Home ಟಾಪ್ ಸುದ್ದಿಗಳು ಡಿಎಂಕೆ ಸಂಸದನ ಪುತ್ರ ಬಿಜೆಪಿಗೆ ಸೇರ್ಪಡೆ

ಡಿಎಂಕೆ ಸಂಸದನ ಪುತ್ರ ಬಿಜೆಪಿಗೆ ಸೇರ್ಪಡೆ

ಚೆನ್ನೈ: ಡಿಎಂಕೆ ರಾಜ್ಯಸಭಾ ಸಂಸದ ತಿರುಚ್ಚಿ ಶಿವ ಅವರ ಪುತ್ರ ಸೂರ್ಯ ಶಿವ  ಚೆನ್ನೈನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಭಾನುವಾರ ಚೆನ್ನೈನ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಸಮ್ಮುಖದಲ್ಲಿ ಸೂರ್ಯ ಶಿವ ಬಿಜೆಪಿ ಸೇರಿದರು.

“15 ವರ್ಷಗಳ ಕಾಲ ನಾನು ಡಿಎಂಕೆ ಸದಸ್ಯನಾಗಿದ್ದೆ, ಆದರೆ ನನ್ನ ಕಠಿಣ ಪರಿಶ್ರಮಕ್ಕೆ ಯಾವುದೇ ಮನ್ನಣೆ ಇರಲಿಲ್ಲ ಮತ್ತು ನಾನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ” ಎಂದು ಸೂರ್ಯ ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ಡಿಎಂಕೆ ಪ್ರಾಥಮಿಕ ಸದಸ್ಯತ್ವ ಹೊಂದಿದ್ದ 32ರ ಹರೆಯದ ಅವರು ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

Join Whatsapp
Exit mobile version