Home ಟಾಪ್ ಸುದ್ದಿಗಳು ನಾರ್ಮಲ್ ಹೆರಿಗೆಗಳನ್ನೇ ಮಾಡಿಸಿ, ಅನಿವಾರ್ಯತೆ ಇದ್ದರೆ ಮಾತ್ರ ಸಿಜೇರಿಯನ್ ಮಾಡಿ: ವೈದ್ಯರಿಗೆ ದಿನೇಶ್ ಗುಂಡೂರಾವ್ ಸಲಹೆ

ನಾರ್ಮಲ್ ಹೆರಿಗೆಗಳನ್ನೇ ಮಾಡಿಸಿ, ಅನಿವಾರ್ಯತೆ ಇದ್ದರೆ ಮಾತ್ರ ಸಿಜೇರಿಯನ್ ಮಾಡಿ: ವೈದ್ಯರಿಗೆ ದಿನೇಶ್ ಗುಂಡೂರಾವ್ ಸಲಹೆ

ಮೈಸೂರು : ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭವಿದ್ದಾಗ ಮಾತ್ರ ಸಿಜೇರಿಯನ್ ಮಾಡಬೇಕು. ರೋಗಿಗಳಿಗೆ ಹೊರಗೆ ಔಷಧಿ ತೆಗೆದುಕೊಂಡು ಬನ್ನಿ ಎಂದು ಚೀಟಿ ಬರೆದುಕೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚನೆ ನೀಡಿದರು.


ನಗರದ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ಕೊಟ್ಟ ಹೆರಿಗೆ ವಾರ್ಡ್ ನಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಿದರು.


ಕೆ.ಆರ್. ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಸ್ವಚ್ಛತೆ ಕಾಪಾಡಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷಚೇತನರಿಗೆ ನೀಡಿರುವ ಸೌಲಭ್ಯಗಳು ಮತ್ತು ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಿಳಿಸಿದರು.

Join Whatsapp
Exit mobile version