‘ಕಾಪು ಮಾರಿ ಪೂಜೆ ವೇಳೆ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬೇಡಿ’ ಪತ್ರ ವೈರಲ್

Prasthutha|

ಕಾಪು: ಮಾರಿ ಪೂಜೆ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ  ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂಬ ಪತ್ರ ಪುರಸಭೆಯ ಮುಖ್ಯಾಧಿಕಾರಿಗೆ ಬರೆಯಲಾಗಿದೆ. ಹಿಂದೂ ಕಾರ್ಯಕರ್ತರು ಈ ಪತ್ರವನ್ನು ಬರೆದು ಅಂಗಡಿ ಸ್ಟಾಲ್’ಗೆ ಅವಕಾಶ ನೀಡಬಾರದೆಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಪುರಸಭೆಯ ಅಧಿಕಾರಿ ಮನವಿ ಬಂದಿರುವುದು ಹೌದು. ಆದರೆ ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಇಲ್ಲಿ ಎಲ್ಲರಿಗೂ ವ್ಯಾಪಾರ ಮಾಡುವ ಅವಕಾಶವಿದೆ ಎಂದು ಹೇಳಿದ್ದಾರೆ.

Join Whatsapp