ಕೇರಳದಿಂದ ರಾಜ್ಯಕ್ಕೆ ಅಕ್ಟೋಬರ್ ಕೊನೆಯವರೆಗೆ ಬರಬೇಡಿ: ರಾಜ್ಯ ಸರ್ಕಾರ

Prasthutha|

ಬೆಂಗಳೂರು: ನೆರೆಯ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -


ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದ್ದು. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ,ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ. ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

- Advertisement -


ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.



Join Whatsapp