ನವದೆಹಲಿ: ಸುಪ್ರೀಂ ಕೋರ್ಟ್ಶ್ರೇಯಾ ಸಿಂಗಾಲ್ವರ್ಸಸ್ ಭಾರತ ಸರ್ಕಾರದ ಪ್ರಕರಣದಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್66ಎ ಅನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಈ ಸೆಕ್ಷನ್ಅಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದಾಖಲಿಸಿರುವ ಎಲ್ಲಾ ದೂರುಗಳನ್ನು ಹಿಂಪಡೆಯುವಂತೆ ಹಾಗೂ ಮುಂದೆ ಆ ಸೆಕ್ಷನ್ಅಡಿ ಯಾರ ವಿರುದ್ಧವೂ ದೂರು ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಬುಧವಾರ ಕೇಂದ್ರ ಗೃಹ ಇಲಾಖೆಯು ನಿರ್ದೇಶನ ನೀಡಿದೆ.
ಈ ನಿಬಂಧನೆಯು ಅಸಾಂವಿಧಾನಿಕ ಎಂದು ಘೋಷಿಸಿರುವ ನಡುವೆಯೂ ಅದರ ಅಡಿ ಪ್ರಕರಣ ದಾಖಲಿಸುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ಗಂಭೀರ ನೋಟ ಬೀರಿದ್ದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗಿದೆ.
“ಐಟಿ ಕಾಯಿದೆಯ ವಜಾ ಮಾಡಲಾಗಿರುವ ಸೆಕ್ಷನ್66ಎ ಅಡಿ ಕೆಲವು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ, ಸೆಕ್ಷನ್66ಎ ಅಡಿ ದೂರು ದಾಖಲಿಸದಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕು. ಅಲ್ಲದೇ, 2015ರ ಮಾರ್ಚ್24ರಂದು ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಸೆಕ್ಷನ್66ಎ ಅಡಿ ದಾಖಲಿಸಲಾಗಿರುವ ಎಲ್ಲಾ ಪ್ರಕರಣಗಳನ್ನು ತಕ್ಷಣ ಹಿಂಪಡೆಯುವಂತೆಯೂ ಗೃಹ ಇಲಾಖೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಶ್ರೇಯಾ ಸಿಂಘಾಲ್ಪ್ರಕರಣದ ಐತಿಹಾಸಿಕ ತೀರ್ಪಿನಲ್ಲಿ ಐಟಿ ಕಾಯಿದೆಯ ಸೆಕ್ಷನ್66ಎ ಅನ್ನು ರದ್ದುಗೊಳಿಸಿದ್ದರೂ ಅದನ್ನು ಇನ್ನೂ ಚಾಲ್ತಿಯಲ್ಲಿ ಇಡಲಾಗಿದೆ ಎಂದು ಸರ್ಕಾರೇತರ ಸಂಸ್ಥೆ ಪಿಯುಸಿಎಲ್ ಸಲ್ಲಿಸಿದ್ದ ಮನವಿ ಆಧರಿಸಿ ಜುಲೈ 5ರಂದು ಕೇಂದ್ರ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು.
ಆರು ವರ್ಷಗಳ ಹಿಂದೆಯೇ ಐಟಿ ಕಾಯಿದೆಯ ಸೆಕ್ಷನ್66ಎ ಅನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದರೂ ದೇಶಾದ್ಯಂತ ಹಲವು ಪ್ರಕರಣಗಳನ್ನು ದಾಖಲಿಸಲಾಗುತ್ತಿರುವುದಕ್ಕೆ ನ್ಯಾಯಾಲಯ ಆಘಾತ ವ್ಯಕ್ತಪಡಿಸಿತ್ತು. “ಅದ್ಭುತ, ಈಗ ನಡೆಯುತ್ತಿರುವ ಬೆಳವಣಿಗೆ ಭಯಾನಕವಾಗಿದೆ” ಎಂದು ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ನೇತೃತ್ವದ ಪೀಠವು ಅಸಮಾಧಾನ ವ್ಯಕ್ತಪಡಿಸಿತ್ತು.
(ಕೃಪೆ: ಬಾರ್ ಬೆಂಚ್)