ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ, ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದು ನಿಮ್ಮ ಅಜಾಗರೂಕ ನಿರ್ಧಾರ ಹಾಗೂ ಅದರ ಪರಿಣಾಮಗಳನ್ನು ಎದುರಿಸಲು ನಿಮಗೆ ಗಟ್ಸ್ ಇದೆಯಾ ಎಂದು ಸವಾಲು ಹಾಕಿದ್ದಾರೆ.
ಅಗ್ನಿಪಥ್ ಯೋಜನೆ ಯುವ ಸೈನಿಕರಿಗಾಗಿ 4 ವರ್ಷಗಳ ಕಾಲಾವಧಿಗೆ ಸೀಮಿತ ಮಾಡಿದ್ದು ಈ ಬಗ್ಗೆ ಟ್ವೀಟ್ ಮಾಡಿರುವ ಓವೈಸಿ, ದಯವಿಟ್ಟು ಮಿಲಿಟರಿ ಮುಖ್ಯಸ್ಥರು ಮೋದಿಯವರ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ ಎಂದಿದ್ದಾರೆ.
ನಿಮ್ಮ ಅಜಾಗರೂಕ ನಿರ್ಧಾರದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಾಗೂ ಪರಿಣಾಮಗಳನ್ನು ಎದುರಿಸಲು ನಿಮ್ಮಲ್ಲಿ ಗಟ್ಸ್(ಧೈರ್ಯ) ಇದೆಯಾ? ದೇಶದ ಯುವಕರ ಭವಿಷ್ಯದ ಬಗೆಗಿನ ಆಕ್ರೋಶ ಕೇವಲ ನಿಮ್ಮನ್ನೇ ಗುರಿಯಾಗಿಸಿಕೊಂಡಿದೆ ಎಂದು ಉವೈಸಿ ಟೀಕಿಸಿದ್ದಾರೆ.