ಮೋದಿ ತವರೂರು ಗುಜರಾತಿನಲ್ಲಿ ಎರಡು ವರ್ಷಗಳ ಪೊಲೀಸ್ ಕಸ್ಟಡಿ ಸಾವಿನ ಸಂಖ್ಯೆ ಎಷ್ಟು ಗೊತ್ತೇ?

Prasthutha|

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತವರೂರಾದ ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 157 ಮಂದಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಇವು 2019 ಮತ್ತು 2020 ರ ಅಂಕಿ ಅಂಶಗಳಾಗಿವೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಮುಖಂಡ ನಿರಂಜನ್ ಪಟೇಲ್ ಅವರ ಪ್ರಶ್ನೆಗೆ ರಾಜ್ಯ ಸರ್ಕಾರ ಈ ರೀತಿ ಉತ್ತರಿಸಿದೆ. ಕಸ್ಟಡಿಯಲ್ಲಿ ಮೃತಪಟ್ಟ ಕೇವಲ ಒಬ್ಬ ವ್ಯಕ್ತಿಯ ಸಂಬಂಧಿಕರಿಗೆ ಮಾತ್ರ ನೆರವು ದೊರೆತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. 2019 ರಲ್ಲಿ 70 ಜನರು, 2020 ರಲ್ಲಿ 87 ಜನರು ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -

ಮೃತರ ಕುಟುಂಬಗಳಿಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬ ಪ್ರಶ್ನೆಗೆ , ಒಬ್ಬ ವ್ಯಕ್ತಿಗೆ 2,50,000 ರೂ. ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇತರರಿಗೆ ಯಾವುದೇ ಪರಿಹಾರವನ್ನು ನೀಡಿಲ್ಲ. ಈ ಕುರಿತು ಸೂಚನೆಗಳನ್ನು ನೀಡಲಾಗಿದೆ ಎಂದು ಗುಜರಾತ್ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಹೇಳಿದ್ದಾರೆ.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ಪೆಕ್ಟರ್‌ಗಳು, ಐದು ಎಸ್‌ಐಗಳು, 19 ಕಾನ್‌ಸ್ಟೆಬಲ್‌ಗಳು ಮತ್ತು ನಾಲ್ಕು ಎಎಸ್‌ಐಗಳು ಸೇರಿದಂತೆ 38 ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp