ವೀಡಿಯೋ ಕಾಲ್ ಮೂಲಕ ಹೆರಿಗೆ; ತಾಯಿ, ಮಗು ಸಾವು

Prasthutha|

ಚಂಡೀಗಢ: ವೈದ್ಯರ ಅನುಪಸ್ಥಿತಿಯಲ್ಲಿ ವೀಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಕಾರಣ ತಾಯಿ ಹಾಗೂ ಮಗು ಮೃತಪಟ್ಟ ಘಟನೆ ಪಂಜಾಬ್ ನ ಮಾನ್ಸಾ ಜಿಲ್ಲೆಯ ಜಾಚಾ ಬಚಾ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -


ವೃತ್ತಿಪರ ವೈದ್ಯರ ಅನುಪಸ್ಥಿತಿಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಇದರಿಂದಾಗಿ ಮಹಿಳೆ ಮತ್ತು ಆಕೆಯ ಮಗುವಿನ ಜೀವಕ್ಕೆ ಅಪಾಯವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.


ಈ ಬಗ್ಗೆ ಕ್ರಮ ಕೈಗೊಳ್ಳುವವರೆಗೆ ಮೃತದೇಹದ ಅಂತ್ಯ ಸಂಸ್ಕಾರ ಮಾಡಲು ನಿರಾಕರಿಸಿದ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Join Whatsapp