ಮದ್ಯ ಸೇವಿಸಿ ಸರ್ಕಾರಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ!

Prasthutha|

ತುಮಕೂರು: ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಮದ್ಯ ಸೇವಿಸಿ ಮಲಗಿರುವ ವೀಡಿಯೋ ವೈರಲ್ ಆಗಿದೆ.

- Advertisement -


ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು.
ಮಾತನಾಡಲು ಪ್ರಯತ್ನಿಸಿದ ರೋಗಿಗಳನ್ನು ಹೊರ ಹೋಗುವಂತೆ ವೈದ್ಯ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.


ಈ ಮೊದಲು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು.

Join Whatsapp