ಸಿಎಂ ಯೋಗಿ ಆದಿತ್ಯನಾಥ್‌ ಗೆ ಮನವಿ ಸಲ್ಲಿಸಲು ಬಂದ ವೈದ್ಯರನ್ನು ವಶಕ್ಕೆ ಪಡೆದ ಪೊಲೀಸರು

Prasthutha|

ಲಖನೌ : ಉತ್ತರ ಪ್ರದೇಶದ ಜಾನ್ಸಿಯಲ್ಲಿ ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗೆ ಸಲ್ಲಿಸಲು ಮುಂದಾದ ಕಿರಿಯ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಮಹಾರಾಣಿ ಲಕ್ಷ್ಮಿ ಬಾಯಿ ಮೆಡಿಕಲ್‌ ಕಾಲೇಜಿನ ಕಿರಿಯ ವೈದ್ಯರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಕೋವಿಡ್‌ ಸೌಲಭ್ಯಗಳ ಪರಿಶೀಲನೆಗಾಗಿ ಸಿಎಂ ಕಾಲೇಜಿಗೆ ಭೇಟಿ ನೀಡಿದ್ದರು.

- Advertisement -

ಆಸ್ಪತ್ರೆಯಲ್ಲಿ ಕೆಲವು ಸೌಲಭ್ಯಗಳು ಮತ್ತು ಆಡಳಿತಕ್ಕೆ ಸಂಬಂಧಿಸಿದ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಲು ಮುಖ್ಯಮಂತ್ರಿಗೆ ಸಲ್ಲಿಸಲು ವೈದ್ಯರು ಮುಂದಾಗಿದ್ದರು. ವೈದ್ಯರನ್ನು ಬಳಿಕ ಬಿಡುಗಡೆಗೊಳಿಸಲಾಗಿದೆ.

ಕೋವಿಡ್‌ ವಾರಿಯರ್ಸ್‌ ಎನ್ನಲಾಗುತ್ತಿರುವ ವೈದ್ಯರ ಜೊತೆ ಪೊಲೀಸರು ಅನುಚಿತವಾಗಿ ವರ್ತಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

https://twitter.com/comrade_shreyas/status/1396481729385299972?s=08
- Advertisement -