ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರಿಗೆ ‘ಭಾರತ ರತ್ನ’ ನೀಡಬೇಕು: ದೆಹಲಿ ಸಿಎಂ ಒತ್ತಾಯ

Prasthutha|

ಹೊಸದಿಲ್ಲಿ: ವಿಶ್ವವನ್ನೇ ತಲ್ಲಣಗೊಳಿಸಿದ ಕೋವಿಡ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲಾ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿಗೆ ಭಾರತ ರತ್ನ ಗೌರವ ನೀಡಿ ಗೌರವಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಇಂಥ ಒಂದು ನಿರ್ಧಾರ ಕೊರೋನಾ ವಿರುದ್ಧ ಹೋರಾಟ ನಡೆಸಿ ಹುತಾತ್ಮರಾಗಿರುವ ವೈದ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ವೈದ್ಯರಿಗೆ ಭಾರತ ರತ್ನ ನೀಡಲು ನಿಯಮಗಳು ಅಡ್ಡಿಯಾಗುತ್ತಿದ್ದರೆ, ಅವುಗಳಲ್ಲಿ ಬದಲಾವಣೆ ಮಾಡಬೇಕಾಗಿ ಬಂದರೆ ಅದನ್ನು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.



Join Whatsapp