ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಇಂದು ಆರೋಪಿಯ ಸುಳ್ಳು ಪತ್ತೆ ಪರೀಕ್ಷೆ

Prasthutha|

ನವದೆಹಲಿ: ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳನ್ನು ತನಿಖಾಧಿಕಾರಿಗಳು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಬಹುದು ಎಂದು ಕಲ್ಕತ್ತಾ ಹೈಕೋರ್ಟ್ ನಿನ್ನೆ ಹೇಳಿದ್ದು, ಇಂದು ಸಿಬಿಐ ತಂಡ ಆರೋಪಿಯನ್ನು ಸುಳ್ಳು ಪತ್ತೆ ಪರೀಕ್ಷೆ (ಲೈ ಡಿಟೆಕ್ಷನ್)ಗೆ ಒಳಪಡಿಸಲಿದೆ.

- Advertisement -

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಯಂಸೇವಕ ಮತ್ತು ಅಪರಾಧ ಸ್ಥಳದಿಂದ ಹೊರಹೋಗುವ ಸಿಸಿಟಿವಿಯಲ್ಲಿ ಕಂಡುಬಂದಿದ್ದ ಆರೋಪಿ ಸಂಜಯ್ ರಾಯ್ ಮೇಲೆ ಈ ಪರೀಕ್ಷೆ ನಡೆಯಲಿದೆ.

ಯಾವುದಾದರೂ ಅಪರಾಧ ಪ್ರಕರಣದಲ್ಲಿ ಆರೋಪಿಗಳು ಸುಳ್ಳು ಹೇಳುತ್ತಿದ್ದಾರೆ ಎಂದು ತನಿಖಾಧಿಕಾರಿಗಳಿಗೆ ಅನುಮಾನ ಬಂದರೆ ಸಾಮಾನ್ಯವಾಗಿ ಸುಳ್ಳು ಪತ್ತೆ ಪರೀಕ್ಷೆ ಮಾಡಲಾಗುತ್ತದೆ. ಅರೋಪಿಗೆ ಮೊದಲು ಚುಚ್ಚು ಮದ್ದು ಕೊಡಲಾಗುತ್ತದೆ. ಆ ನಂತರ ಅವರನ್ನು ಘಟನೆಗೆ ಸಂಬಂಧಿಸಿದಂತೆ ಪ್ರಶ್ನೆ ಮಾಡಲಾಗುತ್ತದೆ. ಆ ಪ್ರಶ್ನೆಗೆ ಉತ್ತರಿಸುವಾಗ ಅವರ ಉಸಿರಾಟ ಸೇರಿದಂತೆ ಮನಸಿನಲ್ಲಿ ಉಂಟಾಗುವ ಒತ್ತಡವನ್ನು ಆಧರಿಸಿ ಸುಳ್ಳು ಪತ್ತೆ ಯಂತ್ರ ಸೂಚನೆ ನೀಡುತ್ತದೆ.



Join Whatsapp