ವ್ಯಕ್ತಿಯನ್ನು ಬಂಧಿಸುವಾಗ ದಾಖಲೆ ನೀಡಬೇಕು: ಸುಪ್ರೀಂಕೋರ್ಟ್

Prasthutha|

ಹೊಸದಿಲ್ಲಿ: ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತು ಅಧಿಕಾರಿಗಳು ದಾಖಲೆಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

- Advertisement -


ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸುವಾಗ ಆತನಿಗೆ ದಾಖಲೆ ನೀಡದಿದ್ದರೆ ಆತನ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.


ಕಾನೂನಿನಡಿ ನಿಗದಿಪಡಿಸಲಾಗಿರುವ ಕ್ರಮಗಳನ್ನು ಅನುಸರಿಸದೆಯೇ ವ್ಯಕ್ತಿಯನ್ನು ಬಂಧಿಸುವ ಮೂಲಕ ತಾತ್ಕಾಲಿಕವಾಗಿಯೂ ಆತನ ಹಕ್ಕನ್ನು ಉಲ್ಲಂಘಿಸಬಾರದು ಎಂದು ನ್ಯಾಯಮೂರ್ತಿಗಳಾದ ಅಜಯ್‌ ರಸ್ತೋಗಿ ಮತ್ತು ಸಿ.ಟಿ. ರವಿಕುಮಾರ್‌ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಹೇಳಿದೆ.



Join Whatsapp