ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಆರ್’ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್’ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.