ನವದೆಹಲಿ: ಕೇಂದ್ರ ಸರ್ಕಾರವು ಎಲ್ಲ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.
ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಸಂದರ್ಭದಲ್ಲಿ ಎಲ್ಲ ಗ್ರಾಹಕರಿಗೆ ಎಲ್‌ಪಿಜಿ ದರವನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮಹಿಳೆಯರಿಗೆ ಇದು ವಿಶೇಷ ಉಡುಗೊರೆ” ಎಂದು ಹೇಳಿದ್ದಾರೆ.