ವಾಷಿಂಗ್ಟನ್: 2024ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಫರ್ಧೆ ಮಾಡುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾದ ಅರ್ಹತಾ ಪತ್ರವನ್ನು ಯುಎಸ್ ಫೆಡರಲ್ ಎಲೆಕ್ಷನ್ ಕಮಿಷನ್ ಗೆ ಡೊನಾಲ್ಡ್ ಟ್ರಂಪ್ ಸಲ್ಲಿಸಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.
ಅಮೆರಿಕವನ್ನು ಮತ್ತೆ ಶ್ರೇಷ್ಠ ಮತ್ತು ವೈಭವಯುತವಾಗಿಸಲು ನಾನು ಇಂದು ರಾತ್ರಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.