ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದೆಲ್ಲಾ ನನ್ನ ವಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಪೂಜೆಯಲ್ಲಿ ನಾವು ಭಾಗಿಯಾಗುವ ಬಗ್ಗೆ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದೇವೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ ಎಂದು ಹೇಳಿದ್ದಾರೆ.
ನಾವು ಹಿಂದುಗಳಲ್ವಾ? ವಿಶೇಷ ಪೂಜೆ ಸಲ್ಲಿಸುತ್ತೇವೆ. ಅದರಲ್ಲೇನು ತಪ್ಪಿದೆ ಎಂದು ಕೇಳಿದ ಪರಮೇಶ್ವರ್, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದೆಲ್ಲಾ ನನ್ನ ವಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.