Home ಟಾಪ್ ಸುದ್ದಿಗಳು ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂಭ್ರಮ ಬೇಡ, ನನಗೆ ಖುಷಿಯಾಗಿಲ್ಲ: ಕುಮಾರಸ್ವಾಮಿ

ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂಭ್ರಮ ಬೇಡ, ನನಗೆ ಖುಷಿಯಾಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.


ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್ ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp
Exit mobile version