ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯಾದರೂ ಅಚ್ಚರಿ ಪಡಬೇಕಾಗಿಲ್ಲ: ಸುಬ್ರಮಣಿಯನ್‌ ಸ್ವಾಮಿ

Prasthutha|

ಬೆಂಗಳೂರು: ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

- Advertisement -


ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಲಾಕ್‌ಡೌನ್‌ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.

‘ಓಮಿಕ್ರಾನ್‌ಗಾಗಿ ಲಾಕ್‌ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿ ಚುನಾವಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿದರೂ ಆಶ್ಚರ್ಯಪಡಬೇಕಿಲ್ಲ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲಾಗದ್ದನ್ನು, ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು’ ಎಂದು ಅವರು ಹೇಳಿದ್ದಾರೆ.



Join Whatsapp