ಜನವರಿ 22ರಂದು ಮನೆಯಲ್ಲಿ ದೀಪ ಬೆಳಗಿಸಿ, ಅಯೋಧ್ಯೆಗೆ ಬರಬೇಡಿ: ಪ್ರಧಾನಿ ಮೋದಿ ಮನವಿ

Prasthutha|

ಅಯೋಧ್ಯೆ: ಜನವರಿ 22ರಂದು ಅಯ್ಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಅಯೋಧ್ಯೆಗೆ ಆಗಮಿಸದಂತೆ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.

- Advertisement -

ಹೊಸ ರೈಲುಗಳು ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಶನಿವಾರ ಉದ್ಘಾಟಿಸಿದ ಪ್ರಧಾನಿ ಮೋದಿ , ರಾಮನ ಭಕ್ತರು ತೊಂದರೆಯಾಗುವಂತ ಏನೇ ಕಾರ್ಯಗಳನ್ನು ಮಾಡಬಾರದು ಎಂದು ಹೇಳಿದರು.

ಇದು ನನ್ನ ವಿನಮ್ರ ಮನವಿ, ಜನವರಿ 22 ರಂದು ರಾಮ ಮಂದಿರಕ್ಕೆ ಬರಲು ನಿರ್ಧರಿಸಬೇಡಿ. ಮನೆಯಲ್ಲಿ ದೀಪ ಬೆಳಗಿಸಿ ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Join Whatsapp