ನನ್ನನ್ನು ಮಹಾತ್ಮ ಗಾಂಧೀಜಿ ಅವರಿಗೆ ಹೋಲಿಸಬೇಡಿ: ರಾಹುಲ್ ಗಾಂಧಿ ಖಡಕ್ ಸೂಚನೆ

Prasthutha|

ದೌಸಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ರಾಜಸ್ಥಾನದಲ್ಲಿ ಸಾಗುತ್ತಿದೆ. ಈ ವೇಳೆ ರಾಹುಲ್ ಗಾಂಧಿ ಮಾತನಾಡಿದ್ದು, ನನ್ನನ್ನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ಹೋಲಿಸಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ.

- Advertisement -


ಪ್ರತಿಸಭೆಯಲ್ಲೂ ತಮ್ಮನ್ನು ರಾಷ್ಟ್ರಪಿತರಿಗೆ ಹೋಲಿಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡು, ಇದು ಮರುಕಳಿಸದಂತೆ ನೋಡಿಕೊಳ್ಳಲು ಎಚ್ಚರಿಸಿದ್ದಾರೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಮಾಡಿದ ಒಳ್ಳೆಯ ಕೆಲಸಗಳನ್ನು ಪಟ್ಟಿ ಮಾಡುವುದರ ಜೊತೆಗೆ ಈಗ ಕಾಂಗ್ರೆಸ್ ಪಕ್ಷ ಜನರಿಗೆ ಏನು ಮಾಡಲು ಬಯಸುತ್ತಿದೆ ಎಂಬುದನ್ನು ತಿಳಿಸುವ ಕೆಲಸ ಪಕ್ಷದಿಂದ ಆಗಬೇಕು ಎಂದಿದ್ದಾರೆ.


“ಮಹಾತ್ಮ ಗಾಂಧೀಜಿಯವರು ದೇಶಕ್ಕಾಗಿ ಹೋರಾಡಿ ರಾಷ್ಟ್ರಪಿತರಾದರು. ತಮ್ಮ ಜೀವನವನ್ನು ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ಅಂತಹ ಮಹಾತ್ಮನೊಂದಿಗೆ ನನ್ನನ್ನು ಎಂದಿಗೂ ಹೋಲಿಸಲು ಸಾಧ್ಯವಿಲ್ಲ. ಪದೇ ಪದೆ ಅಂತಹ ಮಹಾನ್ ವ್ಯಕ್ತಿತ್ವದೊಂದಿಗೆ ನನ್ನನ್ನು ಹೋಲಿಸಬೇಡಿ” ಎಂದು ಹೇಳಿದ್ದಾರೆ.

Join Whatsapp