Home ಟಾಪ್ ಸುದ್ದಿಗಳು ಭಾರತ – ರಷ್ಯಾ ರಾಜತಾಂತ್ರಿಕ ಬಾಂಧವ್ಯಕ್ಕೆ ರಾಜಕೀಯ ಬಣ್ಣ ನೀಡಬೇಡಿ: ವಿದೇಶಾಂಗ ಸಚಿವಾಲಯ

ಭಾರತ – ರಷ್ಯಾ ರಾಜತಾಂತ್ರಿಕ ಬಾಂಧವ್ಯಕ್ಕೆ ರಾಜಕೀಯ ಬಣ್ಣ ನೀಡಬೇಡಿ: ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತದ ರಷ್ಯಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಮುಂದುವರಿಸಿದ್ದು, ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಾಂಧವ್ಯವನ್ನು ರಾಜಕೀಯಗೊಳಿಸಬೇಡಿ ಎಂದು ವಿದೇಶಾಂಗ ಸಚಿವಾಲಯ ಅಂತರಾಷ್ಟ್ರೀಯ ಸಮುದಾಯವನ್ನು ಆಗ್ರಹಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಭಾರತವು ರಷ್ಯಾದೊಂದಿಗೆ ರಾಜತಾಂತ್ರಿಕ ಸಂಬಂಧ ಮುಕ್ತವಾಗಿಸಿದೆ ಮತ್ತು ಯೂರೋಪ್ ಮೂಲಕ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುತ್ತಿದೆ ಎಂದು ತಿಳಿಸಿದ್ದಾರೆ.

ಉಕ್ರೇನ್ ನಲ್ಲಿರುವ ಬಿಕ್ಕಟ್ಟಿನ ಹೊರತಾಗಿಯೂ ರಷ್ಯಾದೊಂದಿಗಿನ ವ್ಯಾಪಾರ ಸಂಬಂಧಗಳ ಕುರಿತು ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತದ ಮೇಲೆ ಟೀಕೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅರಿಂದಮ್ ಬಾಗ್ಚಿ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಪ್ರಸಕ್ತ ಪರಿಸ್ಥಿತಿಯಲ್ಲಿ ಭಾರತ – ರಷ್ಯಾ ನಡುವೆ ಯಾವ ರೀತಿಯ ಪಾವತಿ ಕಾರ್ಯವಿಧಾನದ ಕುರಿತು ಚರ್ಚೆ ನಡೆಯುತ್ತಿದೆ ಎಂದು ಬಾಗ್ಚಿ ತಿಳಿಸಿದ್ದಾರೆ.

Join Whatsapp
Exit mobile version