ಬಾಗಲಕೋಟೆ: ತೇರದಾಳ ಕ್ಷೇತ್ರದಲ್ಲಿ ಉಮಾಶ್ರೀ ಹಠಾವೋ ತೇರದಾಳ ಬಚಾವೋ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸ್ಥಳೀಯ ಕಾರ್ಯಕರ್ತರು, ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ರಬಕವಿ-ಬನಹಟ್ಟಿ ನಗರದಲ್ಲಿ ಟೈಯರ್’ಗೆ ಬೆಂಕಿ ಪ್ರತಿಭಟನೆ ನಡೆಸಿದರು.
ಸ್ಥಳೀಯರಿಗೆ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತ. ಆದರೆ ವಲಸೆ ಬಂದವರಿಗೆ ಟಿಕೆಟ್ ನೀಡಿದರೆ ಮತ್ತೆ ಸೋಲಾಗುತ್ತದೆ, ಸ್ವಾಭಿಮಾನಕ್ಕೆ ಪೆಟ್ಟು ಕೊಡಬೇಡಿ ದಯವಿಟ್ಟು ಸ್ಥಳೀಯ ನಾಯಕರಿಗೆ ಆದ್ಯತೆ ನೀಡಿ ಎಂದು ಪ್ರತಿಭಟನಕಾರರು ಆಗ್ರಹಿಸಿದರು.