ಪಾಪ ತೊಳೆದುಕೊಳ್ಳಲು ಕಾಶಿ ಯಾತ್ರೆ ಮಾಡಬೇಕಿಲ್ಲ, ಬಿಜೆಪಿ ಶಾಲು ಹಾಕಿಕೊಂಡರೆ ಸಾಕು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Prasthutha|

ಬೆಂಗಳೂರು: ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿ, ಮೇಜು ಕುಟ್ಟಿ, ಗೋಮಾತೆ ಪೂಜೆ ಮಾಡಿ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದ ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರು, ಚರ್ಮ ಉದ್ಯಮ ಕಾರ್ಮಿಕರು, ರಾಜ್ಯದ ಆರ್ಥಿಕ ಪರಿಸ್ಥಿತಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಿಗೆ ಆರ್ಥಿಕ ಪರಿಸ್ಥಿತಿ, ಕಾರ್ಮಿಕರು, ರೈತರು ಹಾಗೂ ಕೈಗಾರಿಕೆಗಳ ಬಗ್ಗೆ ಕಾಳಜಿಯಿಲ್ಲ. ಅವರಿಗೆ ಈ ಕಾಯ್ದೆ ಜಾರಿಗೆ ತರುವ ಮೂಲಕ, ಕೇಶವ ಕೃಪದಿಂದ ಬೆನ್ನು ತಟ್ಟಿಸಿಕೊಳ್ಳುವುದಷ್ಟೇ ಮುಖ್ಯವಾಗಿದೆ. ಮಂತ್ರಿಗಳು ಮಾಧ್ಯಮಗಳ ಮುಂದೆ ಗೋವು, ಕರುಗಳಿಗೆ ಮುತ್ತು ನೀಡುವುದು ಬಿಟ್ಟು ಬೇರೇನೂ ಮಾಡಿಲ್ಲ ಎಂದು ಟೀಕಿಸಿದರು.


ಸರ್ಕಾರದಲ್ಲಿ ಇರುವವರಿಗೆ ಈ ಕಾಯ್ದೆಯ ಉದ್ದೇಶ ಏನಿದೆ ಎಂದು ಗೊತ್ತಿಲ್ಲ. ಈ ಕಾಯ್ದೆ ಬಂದ ನಂತರ ರಾಜ್ಯಕ್ಕೆ, ರೈತರಿಗೆ, ಕಾರ್ಮಿಕರಿಗೆ, ಕೈಗಾರಿಕೆಗಳಿಗೆ ಎಷ್ಟು ಲಾಭವಾಯಿತು ಎಂದು ಯಾರಾದರೂ ಪರಿಶೀಲನೆ ಮಾಡಿದ್ದಾರಾ. ಎಲ್ಲಾ ಕಾರ್ಮಿಕರು ಬೀದಿಗೆ ಬಂದಿದ್ದು ಈ ಬಗ್ಗೆ ಸರ್ಕಾರ ಯಾವುದಾದರೂ ಕ್ರಮ ಕೈಗೊಂಡಿದೆಯೇ? ಒಂದಾದರೂ ಯೋಜನೆ ರೂಪಿಸಿದೆಯೇ? ಯಾವುದಾದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆಯೇ? ಆದರೂ ಈ ಕಾಯ್ದೆ ಜಾರಿಯನ್ನು ಯಾವ ಉದ್ದೇಶಕ್ಕಾಗಿ ಮಾಡಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು.

- Advertisement -


ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲೂ ದೊಡ್ಡ ಕಳ್ಳರಿಂದ ಹಿಡಿದು ಚಿಕ್ಕ ಕಳ್ಳರು ಎಲ್ಲರೂ ಬಿಜೆಪಿ ಸೇರುತ್ತಿದ್ದಾರೆ. ಪಾಪ ತೊಳೆದುಕೊಳ್ಳಲು ಕಾಶಿ ಯಾತ್ರೆ ಮಾಡಬೇಕಿಲ್ಲ, ಬಿಜೆಪಿ ಶಾಲು ಹಾಕಿಕೊಂಡರೆ ಇಲ್ಲೇ ಎಲ್ಲವೂ ಪರಿಹಾರ ಆಗುತ್ತದೆ. ನೀವು ಏನೇ ಕಾನೂನು ಬಾಹಿರ, ಸಂವಿಧಾನ ಉಲ್ಲಂಘನೆ ಮಾಡಿದರೂ ಬಿಜೆಪಿ ಶಾಲು ಹಾಕಿಕೊಂಡರೆ ನಿಮ್ಮಷ್ಟು ಪರಿಶುದ್ಧ ಬೇರೊಬ್ಬರಿಲ್ಲ ಎಂದು ವ್ಯಂಗ್ಯವಾಡಿದರು.

Join Whatsapp