Home ಟಾಪ್ ಸುದ್ದಿಗಳು ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದರು.


ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Join Whatsapp
Exit mobile version