Home ಟಾಪ್ ಸುದ್ದಿಗಳು ಪ್ರಜ್ವಲ್ ಬಗ್ಗೆ ಗೊತ್ತಿಲ್ಲ: ರೇವಣ್ಣ

ಪ್ರಜ್ವಲ್ ಬಗ್ಗೆ ಗೊತ್ತಿಲ್ಲ: ರೇವಣ್ಣ

ಹಾಸನ: ಸಂಸದ ಪ್ರಜ್ವಲ್ ಬಗ್ಗೆ ನನಗೆ ಗೊತ್ತಿಲ್ಲ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.


ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವ ಎಂದರು.


ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ ಜನರು ದೇವೇಗೌಡರಿಗೆ 60 ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ ನನಗೆ ಶಕ್ತಿ ಕೊಟ್ಟಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ ಎಂದರು.

Join Whatsapp
Exit mobile version