ಬೆಂಗಳೂರು, ಜು.31: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಹೈಕಮಾಂಡ್ಗೆ ಸೇರಿದ್ದು, ಕೇಂದ್ರ ನಾಯಕರ ತೀರ್ಮಾನಕ್ಕೆ ತಾವು ಬದ್ಧ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ತಮ್ಮ ನಿವಾಸಕ್ಕೆ ಇಂದು ಆಗಮಿಸಿದ್ದ ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಸೇರುತ್ತೇನೊ ಬಿಡುತ್ತೇನೊ ಗೊತ್ತಿಲ್ಲ. ಕೇಂದ್ರ ನಾಯಕರು ಯಾವ ತೀರ್ಮಾನ ತೆಗೆದುಕೊಂಡರೂ ಬದ್ಧ ಎಂದರು.
ಮುಂದೆಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕು. ಆ ರೀತಿ ಪಕ್ಷ ಹಾಗೂ ಸರ್ಕಾರದಲ್ಲಿ ಬದಲಾವಣೆಗಳಾಗುತ್ತಿವೆ. ಮುಂದಿನ ಬಾರಿಯೂ ಬಿಜೆಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದರು. ಯಡಿಯೂರಪ್ಪ ಅವರು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಒಂದು ಬಾರಿಯು ಬಿಜೆಪಿ ಪೂರ್ಣ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ ಎಂದರು.
ಆರ್ ಎಸ್ ಎಸ್ ನಾಯಕರಾದ ಕಲ್ಲಡ್ಕ ಪ್ರಭಾಕರ್ ಅವರು ಹಿರಿಯರು ಅವರು ನಮ್ಮ ಮನೆಗೆ ಬರುತ್ತಲೇ ಇರುತ್ತಾರೆ ಇದರಲ್ಲೇನು ವಿಶೇಷವಿಲ್ಲ ಸೌಹಾರ್ದ ಭೇಟಿ ಎಂದರು.