ಸ್ನೇಹಿತರ ಹೆಸರಿನಲ್ಲಿ ಹೆಚ್ಚು ಆಸ್ತಿ ಮಾಡದೆ, ಜನರಿಗಾಗಿ ಸರಿಯಾದ ನೀತಿ ರೂಪಿಸಿ: ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

Prasthutha|

ನವದೆಹಲಿ: ಸ್ನೇಹಿತರ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡದೆ ಜನರ ಅಭಿವೃದ್ಧಿಗಾಗಿ ಸೂಕ್ತ ನೀತಿಗಳನ್ನು ರೂಪಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

- Advertisement -

ಸಮುದಾಯ ಅಡುಗೆ ಯೋಜನೆಯನ್ನು ಜಾರಿಗೆ ತರಲು ಪ್ಯಾನ್ – ಇಂಡಿಯಾ ನೀತಿಯನ್ನು ರೂಪಿಸದ ಕೇಂದ್ರದ ವಿರುದ್ಧ ಸುಪ್ರೀಮ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಸಿವಿನಿಂದ ಸಾಯುವ ಜನರಿಗೆ ಆಹಾರವನ್ನು ಒದಗಿಸುವುದು ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ ಎಂದು ಹೇಳಿರುವ ಸುಪ್ರೀಮ್ ಕೋರ್ಟ್, ರಾಜ್ಯಗಳೊಂದಿಗೆ ಸಭೆ ನಡೆಸಲು ಕೇಂದ್ರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.

- Advertisement -

ಸಮುದಾಯದ ಅಡುಗೆ ಯೋಜನೆಯನ್ನು ಜಾರಿಗೆ ತರಲು ಪ್ಯಾನ್ – ಇಂಡಿಯಾ ನೀತಿ ರೂಪಿಸುವ ಕುರಿತು ಕೇಂದ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಮ್ ಕೋರ್ಟ್ ನ ವರದಿಯನ್ನು ಟ್ಯಾಗ್ ಮಾಡಿದ ರಾಹುಲ್ ಗಾಂಧಿ, ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸುಪ್ರೀಮ್ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಎನ್.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿ ಕೆಂದ್ರ ಸರ್ಕಾರವನ್ನು ತರಾಟೆಗೆ ತೆಗೆದಿತ್ತು.



Join Whatsapp