ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

- Advertisement -


ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆಎನ್ ರಾಜಣ್ಣ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

Join Whatsapp
Exit mobile version