ಬೆಂಗಳೂರು: ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದಾರೆ. ಆದ್ರೆ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ತಂದೆಯ ವಿರುದ್ಧವೇ ತೀವ್ರ ಆಕ್ರೋಶ ನಡೆಸುತ್ತಾ ಇದ್ದಾರೆ.
ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ ಡಿಕೆ ಶಿವಕುಮಾರ್ ಅವರ ಬಳಿ ನನ್ನ ಸಿಡಿ ಇದ್ರೆ ಅದನ್ನು ಧೈರ್ಯವಾಗಿ ಅದನ್ನು ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದರು.
ಈ ಆರೋಪಕ್ಕೆ ಡಿಕೆ ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಿಶಾ ಯೋಗೇಶ್ವರ್ ಆರೋಪ ಸತ್ಯಕ್ಕೆ ದೂರವಾದದ್ದು…
ನಿಶಾ ಯೋಗೇಶ್ವರ್ ಆರೋಪಕ್ಕೆ ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಅವರು, ನಿಶಾ ಯೋಗೇಶ್ವರ್ ಆಪಾದನೆ ಸತ್ಯಕ್ಕೆ ದೂರವಾದದ್ದು, ನಿಶಾ ಯೋಗೇಶ್ವರ್ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾಗಿವೆ. ಕಳೆದ ಲೋಕಸಭೆ ಚುನಾವಣೆಗೆ ಮೊದಲು ನಿಶಾ ಯೋಗೇಶ್ವರ್ ಅವರು ಕುಮಾರಕೃಪಾದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಒಮ್ಮೆ ಭೇಟಿ ಮಾಡಿದ್ದರು. ಆಗ ಶಿವಕುಮಾರ್ ಅವರು ತಂದೆ-ಮಗಳ ವಿಚಾರದಲ್ಲಿ ತಾನು ತಲೆ ಹಾಕುವುದಿಲ್ಲ ಎಂದಿದ್ದರು.
ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿಗೆ ನಾನು ಒಳಗಾಗಲು ಬಯಸುವುದಿಲ್ಲ. ನಿಮ್ಮ ಕುಟುಂಬ ವಿಚಾರದಲ್ಲಿ ನಾನು ತಲೆ ಹಾಕಿಲ್ಲ, ಈಗಲೂ ಹಾಕುವುದಿಲ್ಲ. ಮುಂದೆಯೂ ಹಾಕುವುದಿಲ್ಲ. ನಿಮ್ಮ ತಂದೆಯ ಜೊತೆ ಮಾತನಾಡಿ ನೀವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದರು. ಹೀಗಾಗಿ ನಿಶಾ ಯೋಗೇಶ್ವರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋ ತುಣುಕುಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ಸಂಪೂರ್ಣ ದೂರವಾಗಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಡಿಕೆ ಶಿವಕುಮಾರ್ ಸರ್, ನನ್ನ ಸಿಡಿ ನಿಮ್ಮ ಬಳಿ ಇದ್ರೆ ಅದನ್ನು ಧೈರ್ಯವಾಗಿ ಬಿಡುಗಡೆ ಮಾಡಿ ಎಂದು ಸವಾಲು ಎಸೆದಿದ್ದರು. ಡಿಕೆ ಶಿವಕುಮಾರ್ ಅವರು ನನ್ನ ಸಿಡಿ ಇಟ್ಟುಕೊಂಡು ನನ್ನ ತಂದೆಯವರನ್ನು ಬ್ಲಾಕ್ ಮೇಲ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಹೋಗಿದ್ದೀರಂತೆ ಎಂದು ಖಾಸಗಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿ ಪ್ರಸಾರ ಮಾಡಿದೆ. ಈ ಕುರಿತು ಡಿಕೆ ಶಿವಕುಮಾರ್ ಸರ್ ಅವರೇ ಸ್ಪಷ್ಟನೆ ನೀಡಬೇಕು ಎಂದು ನಿಶಾ ಯೋಗೇಶ್ವರ್ ಅವರು ಕೇಳಿಕೊಂಡಿದ್ದರು.