ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ನಾಮಕರಣ ಬೇಡ: ಬಿ.ಎಸ್.ಯಡಿಯೂರಪ್ಪ

Prasthutha|

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿನ ನಾಮಕರಣ ಬೇಡ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.


ಈ ಹಿಂದೆ ಪ್ರಸ್ತಾವ ಬಂದಾಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೆಸರು ಇಡುವುದು ಬೇಡ, ಬೇರೆ ಯಾವುದೇ ಗಣ್ಯರ ಹೆಸರನ್ನಿಡುವಂತೆ ಸೂಚಿಸಿದ್ದರು.

Join Whatsapp