Home ಟಾಪ್ ಸುದ್ದಿಗಳು ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ: ಏಕನಾಥ ಶಿಂಧೆ

ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ: ಏಕನಾಥ ಶಿಂಧೆ

ಮುಂಬೈ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ. ಈಗ ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ. ನಾವು ಗಡಿ ನಿವಾಸಿಗಳೊಂದಿಗೆ ಒಟ್ಟಾಗಿ ನಿಲ್ಲಬೇಕು ಎಂದು ಹೇಳಿದರು.

ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಕೆಲ ಗಡಿ ಗ್ರಾಮಗಳ ನೀರಿನ ಸಮಸ್ಯೆ ನೀಗಿಸಿದ್ದೇವೆ. ನಾವು ಗಡಿ ನಿವಾಸಿಗಳೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು  ಎಂದಿದ್ದಾರೆ.

Join Whatsapp
Exit mobile version