Home ಟಾಪ್ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡಬೇಡಿ: ಕಾರ್ಯಕರ್ತರಿಗೆ ಕಾಂಗ್ರೆಸ್ ಎಚ್ಚರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡಬೇಡಿ: ಕಾರ್ಯಕರ್ತರಿಗೆ ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡಬೇಡಿ ಎಂದು ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದೆ.


ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಕರ್ನಾಟಕ ವಿಧಾನ ಸಭಾ ಚುನಾವಣೆ – 2023 ರ ಸಂಬಂಧ ಸಾಮಾಜಿಕ ಜಾಲತಾಣವಾದ ಫೇಸ್’ಬುಕ್, ವಾಟ್ಸಾಪ್, ಇನ್ ಸ್ಟಾ ಗ್ರಾಂ, ಟ್ವಿಟರ್ ಮತ್ತು ಇನ್ನಿತರ ಮಾಧ್ಯಮಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ, ಪಕ್ಷದ ನಾಯಕರ ಅಥವಾ ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವುದಾಗಲಿ ಅಥವಾ ಕಮೆಂಟ್ ಮಾಡುವುದನ್ನು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಗಂಭೀರವಾಗಿ ಪರಿಗಣಿಸಲಿದ್ದು, ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ.

Join Whatsapp
Exit mobile version