ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಬೆಂಗಳೂರು: ಸಂವಿಧಾನ ವಿರೋಧಿಗಳ ಕೈಯಲ್ಲಿ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ ಎಂದರು.


ಅಂಬೇಡ್ಕರ್ ಭಾರತೀಯ ಸಮಾಜಕ್ಕೆ ತಕ್ಕ ಸಾಮಾಜಿಕ ನ್ಯಾಯದ ಸಂವಿಧಾನ ನೀಡಿದರು. ಆದರೆ ಇಲ್ಲಿಯವರೆಗೂ ಸಂವಿಧಾನದ ಆಶಯಗಳು ಸಂಪೂರ್ಣ ಈಡೇರಿಲ್ಲ. ಶ್ರಮಿಕ ಶೂದ್ರ ವರ್ಗ ಶ್ರಮಿಕರಲ್ಲದವರ ಸೇವೆ ಮಾಡಿಕೊಂಡಿರಬೇಕಿತ್ತು. ಇದನ್ನು ದೇವರಾಜ ಅರಸರು ಜೀತ ವಿಮುಕ್ತಿ, ಋಣಮುಕ್ತ ಕಾರ್ಯಕ್ರಮಗಳ ಮೂಲಕ ತಪ್ಪಿಸಿದರು ಎಂದು ಹೇಳಿದರು.

Join Whatsapp