Home ಟಾಪ್ ಸುದ್ದಿಗಳು ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್

ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್

ನವದೆಹಲಿ: ಹೋರಾಟದಿಂದ ಹಿಂದೆ ಸರಿದಿಲ್ಲ, ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಸ್ಪಷ್ಟನೆ ನೀಡಿದ್ದಾರೆ.


ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಹೋರಾಟದಿಂದ ಹಿಂದೆ ಸರಿದಿದ್ದು, ತಮ್ಮ ಕೆಲಸಕ್ಕಾಗಿ ರೈಲ್ವೇ ಇಲಾಖೆಗೆ ಮರಳಿದ್ದಾರೆ ಎಂದು ವರದಿಯಾಗಿತ್ತು. ಈ ವರದಿ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಹೋರಾಟ ಹಿಂದಕ್ಕೆ ಪಡೆದಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

Join Whatsapp
Exit mobile version