ಕಲ್ಲಡ್ಕ ಪ್ರಭಾಕರ್‌ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಡಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Prasthutha|

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್‌ ಭಟ್ ತನಿಖೆಗೆ ಸಹಕಾರಿಸಬೇಕು. ಆದರೆ, ಸರ್ಕಾರ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ನಿರ್ದೇಶಿಸಿದೆ.

- Advertisement -

ಶ್ರೀರಂಗಪಟ್ಟಣ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್‌ ರದ್ದತಿ ಕೋರಿ ಕಲ್ಲಡ್ಕ ಪ್ರಭಾಕರ್‌ ಭಟ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಶ್‌ ರೈ ಕೆ ಅವರ ನೇತೃತ್ವದ ರಜಾಕಾಲೀನ ಪೀಠವು ನಡೆಸಿತು. “ಅರ್ಜಿದಾರರು ತನಿಖೆಗೆ ಸಹಕರಿಸಬೇಕು. ಸರ್ಕಾರ ಅರ್ಜಿದಾರರನ್ನು ಬಂಧಿಸಬಾರದು” ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 9, 2024ಕ್ಕೆ ಮುಂದೂಡಿತು.

Join Whatsapp