SSLC ಪರೀಕ್ಷೆಗೆ ಹಿಜಾಬ್‌ ಧರಿಸಿ ಬಂದರೆ ಅವಕಾಶವಿಲ್ಲ: ಬಿ.ಸಿ ನಾಗೇಶ್‌

Prasthutha|

ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ SSLC ಪರೀಕ್ಷೆ ಆರಂಭವಾಗಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

- Advertisement -

ಸಚಿವರು ಹಿಜಾಬ್‌ ಕುರಿತಂತೆ ಕೂಡ ಮಾತನಾಡಿದ್ದು , ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಇದನ್ನು ವಿದ್ಯಾರ್ಥಿಯನಿಯರು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ರಾಜ್ಯದಲ್ಲಿ ಈ ಬಾರಿ 8,73,846 ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದಾರೆ

ಇನ್ನು ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಮುಸ್ಲಿಂ ಮುಖಂಡರು ಚರ್ಚಿಸಿದ್ದು. ಹಿಜಾಬ್ ಬದಲು ದುಪ್ಪಟ್ಟಾಗೆ ಅವಕಾಶ ಕೊಡಿ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಸದನದಲ್ಲಿ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.



Join Whatsapp