Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್ ಪಾಟೀಲ

ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್ ಪಾಟೀಲ

ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಎಂಪಾಕ್ಸ್ (ಮಂಕಿಪಾಕ್ಸ್) ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.


ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಎಂಪಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ ಮಾಹಿತಿ ನೀಡಿದರು.


ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

Join Whatsapp
Exit mobile version