‘ಬಿಜೆಪಿ ಹಣದ ಹೊಳೆ ಹರಿಸಿದ್ದು ನಿಮಗೆ ಕಾಣುತ್ತಿಲ್ಲವೇ?’ ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಾಂಗ್ರೆಸ್

Prasthutha|

ಬೆಂಗಳೂರು:  ಉಪಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ನಾಯಕರು ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುತ್ತಿರುವ ವಿಡಿಯೋ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ.

- Advertisement -

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ.! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಸ್ಕಿ ಕ್ಷೇತ್ರದಲ್ಲಿ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮತದಾರರಿಗೆ ಹಣ ಹಂಚಿದ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ..? ಕಂಡರೂ ಜಾಣ ಕುರುಡೇ.? ಎಂದು ಪ್ರಶ್ನಿಸಿದೆ.

Join Whatsapp