ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ: ಮೃತದೇಹವಿಟ್ಟು ಪ್ರತಿಭಟನೆ

Prasthutha|

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಕ್ಷ್ಮಣ್ ಪುರಿಯಲ್ಲಿ ನಡೆದಿದೆ.

- Advertisement -


ಸೌಂದರ್ಯ (26) ಮೃತ ಗೃಹಿಣಿ.


ವರದಕ್ಷಿಣೆ ಕಿರುಕುಳ ಹಾಗೂ ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳು ಆಗಿಲ್ಲ ಎಂದು ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಸೌಂದರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಈ ಹಿನ್ನೆಲೆಯಲ್ಲಿ ಸೌಂದರ್ಯ ಕುಟುಂಬಸ್ಥರು ಶನಿವಾರ ನಗರದ ಶೇಷಾದ್ರಿಪುರ ಪೊಲೀಸ್ ಠಾಣೆಗೆ ಮೃತದೇಹವನ್ನು ತಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

Join Whatsapp