ವರದಕ್ಷಿಣೆ ಕಿರುಕುಳ ಆರೋಪ: ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಆತ್ಮಹತ್ಯೆ

Prasthutha|

ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

- Advertisement -


ಆತ್ಮಹತ್ಯೆ ಮಾಡಿಕೊಂಡವರನ್ನು ಬಸಮ್ಮ ಅಲಿಯಾಸ್ ರೂಪಾ (34) ಎಂದು ಗುರುತಿಸಲಾಗಿದೆ. ಇವರು ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


ರೂಪಾ ಹಾಗೂ ಅರ್ಜುನ್ ಪರಸ್ಪರ ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ಅರ್ಜುನ್ ಹಾಗೂ ರೂಪ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ನಂತರ ಪತಿ ಹಾಗೂ ಆತನ ಕುಟುಂಬದವರಿಂದ ರೂಪಾಗೆ ವರದಕ್ಷಿಣೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

- Advertisement -


ಭಾನುವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ನೋಟ್ ಬರೆದಿಟ್ಟು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp