ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ’ ಎಂದಿದ್ದಾರೆ.