ಚಿಕ್ಕಬಳ್ಳಾಪುರ: ಗಣರಾಜ್ಯೋತ್ಸವ ದಿನದಂದು ರಾಯಚೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಜೆ ಎಂ ದೇವರಾಜ್, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಸಂವಿಧಾನಕ್ಕೆ ಅಪಮಾನ ಮಾಡಿದಂತಾಗಿದೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಧನಲಕ್ಷ್ಮಮ್ಮ, ಶ್ಯಾಮ್ ರಾಜ್ , ಎಂ. ಆಂಜಿ, ಕೃಷ್ಣಪ್ಪ, ದ್ವಾರಪ್ಪಲ್ಲಿ ಮಂಜುನಾಥ್, ವೆಂಕಟರಮಣ, ಸೀಕಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.