ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ನೇಮಕಗೊಂಡಿದ್ದಾರೆ.
ಗಂಗಾಧರ್ ಅವರು ನಿಮ್ಹಾನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಪದ್ಮಶ್ರೀ ಪುರಸ್ಕೃತರೂ ಆಗಿದ್ದಾರೆ. ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ ನೇಮಕಗೊಂಡಿದ್ದಾರೆ. ತಮ್ಮ ವೈದ್ಯಕೀಯ ರಂಗ ಸೇವೆಗೆ ಡಾ.ಬಿ.ಎನ್.ಗಂಗಾಧರ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು.