ಡಾ.ಕೆ. ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರೂ ರಾಜೀನಾಮೆ ನೀಡುತ್ತೇನೆ: ಪ್ರದೀಪ್ ಈಶ್ವರ್

Prasthutha|

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರು ಒಂದು ಮತದ ಮುನ್ನಡೆ ಸಾಧಿಸಿದರೂ ನಾನು ರಾಜೀನಾಮೆ ನೀಡುತ್ತೇನೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸುಧಾಕರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗಿಂತ ಒಂದು ಮತ ಹೆಚ್ಚು ಪಡೆದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯ ಸಂದರ್ಭದಲ್ಲಿ ಭಾರೀ ಸ್ಟ್ರಿಕ್ಟ್ ಮಾಡಿಸಿದ್ದಾರೆ. ಸಿಸಿ ಕ್ಯಾಮೆರಾ ಹಾಕಿ ಪರೀಕ್ಷೆ ನಡೆಸಿದ್ದಾರೆ. ಮಾಸ್ ಕಾಪಿ ಹೊಡೆಯೋಕೆ ಕಡಿವಾಣ ಹಾಕಿದ್ದಾರೆ. ಹಿಂದೆಲ್ಲಾ ಮಾಸ್ ಕಾಪಿ ನಡೆಯುತ್ತಿತ್ತು. ಆದರೆ ಈ ಭಾರಿ ಮಾಸ್ ಕಾಪಿ ನಡೆದಿಲ್ಲ ಎಂದರು.



Join Whatsapp