ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫರಂಗಿಪೇಟೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್’ಗೆ ಇಂದು ನೀತಿ ಸಂಹಿತೆ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
204 ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಫರಂಗಿಪೇಟೆ ಚೆಕ್ ಪೋಸ್ಟ್’ಗೆ ಕುಮಾರ್ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ವಾಹನ ತಪಾಸಣೆ ಮಾಡುವಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಕೂಡ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.