ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಡಾ.ನಿರ್ಮಲಾನಾಂದನಾಥ ಸ್ವಾಮೀಜಿ ಆಗ್ರಹ: ಇಕ್ಕಟ್ಟಿನಲ್ಲಿ ಬೊಮ್ಮಾಯಿ

Prasthutha|

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿದ ರಾಜ್ಯ ಸರ್ಕಾರದ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ಆಗ್ರಹಿಸಿದ್ದು, ಮುಖ್ಯಮಂತ್ರಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

- Advertisement -

ಒಕ್ಕಲಿಗರ ಪರಮೋನ್ನತ ಸ್ವಾಮೀಜಿಯವರು ಚಕ್ರತೀರ್ಥ ವಜಾಕ್ಕೆ ಆಗ್ರಹಿಸಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿಯ ಒಕ್ಕಲಿಗ ಶಾಸಕರು ಕೂಡ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ನಿರ್ಮಲಾನಂದನಾಥ ಸ್ವಾಮೀಜಿ ಪತ್ರ ಬರೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದ್ದಾರೆ.



Join Whatsapp